ಭೋಪಾಲ್(ಮಧ್ಯಪ್ರದೇಶ): ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್ಗೆ ಸಂಬಂಧಿಸಿದ ಎಡಿಟ್ ಮಾಡಿರುವ ನಕಲಿ ವಿಡಿಯೋವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸಿಎಂ ವಿರುದ್ಧ ನಕಲಿ ವಿಡಿಯೋ ಪೋಸ್ಟ್: ದಿಗ್ವಿಜಯ್ ಸಿಂಗ್ ಸೇರಿ 11 ಜನರ ವಿರುದ್ಧ ಕೇಸ್ - Fake Video
ಸಿಎಂ ಶಿವರಾಜ್ ಸಿಂಗ್ ಚೌಹಾಣ್ಗೆ ಸಂಬಂಧಿಸಿದ ನಕಲಿ ವಿಡಿಯೋ ಹಂಚಿಕೊಂಡ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿ ಪ್ರಕರಣ ದಾಖಲಿಸಿದೆ.

ದಿಗ್ವಿಜಯ್ ಸಿಂಗ್
ಈ ಹಿಂದಿನ ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರದ ಅಬಕಾರಿ ನೀತಿ ಕುರಿತು ಸಿಎಂ ಶಿವರಾಜ್ ಸಿಂಗ್ ಚೌವಾಣ್ ಅವರು ಹೇಳಿಕೆ ನೀಡಿರುವಂತೆ ವಿಡಿಯೋ ಎಡಿಟ್ ಮಾಡಲಾಗಿದೆ. ಅದನ್ನು ಪೋಸ್ಟ್ ಮಾಡಿದ ದಿಗ್ವಿಜಯ್ ಸಿಂಗ್ ಸೇರಿ 11 ಮಂದಿ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಭೋಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದಕ್ಕಾಗಿ ಸಿಎಂ ಚೌಹಾನ್ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
Last Updated : Jun 16, 2020, 1:29 PM IST