ಆಂಧ್ರಪ್ರದೇಶ:ಆಂಧ್ರಪ್ರದೇಶದ ನೂತನ ಸಿಎಂ ಜಗನ್ಮೋಹನ ರೆಡ್ಡಿ ಅಧಿಕಾರಕ್ಕೇರಿದ ನಂತರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಪಕ್ಷದ ಚಟುವಟಿಕೆಗಳಿಗೆ ಕೇಂದ್ರವಾಗಿದ್ದ ಪ್ರಜಾವೇದಿಕೆ ಕಟ್ಟಡವನ್ನು ನೆಲಸಮ ಮಾಡಲಾಗಿದೆ.
ಕಳೆದ ಬುಧವಾರ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ, ಹಲವು ವಿಷಯಗಳ ಚರ್ಚೆ ನಂತರ ವಿರೋಧ ಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ ನಿರ್ಮಾಣವಾದ ಪ್ರಜಾವೇದಿಕೆ ಕಟ್ಟಡದ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಾನೂನುಬಾಹಿರವಾಗಿ ಹಾಗೂ ನಿರ್ಮಾಣದ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ನೆಲಸಮ ಮಾಡುವಂತೆ ಜಗನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.