ಹೈದರಾಬಾದ್:ಇಂದು ಬೆಳ್ಳಂಬೆಳಗ್ಗೆ ನಗರದ ಕೆಲವೆಡೆ ಮಳೆ ಸುರಿದಿದ್ದು, ಇಂದು ಸಹ ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ನಗರದಲ್ಲಿ ಅಕ್ಟೋಬರ್ 22ರವರೆಗೆ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ಬೆಳ್ಳಂಬೆಳಗ್ಗೆ ಮುತ್ತಿನನಗರಿಯಲ್ಲಿ ಮತ್ತೆ ವರುಣನ ಆರ್ಭಟ: ಅ. 22ರವರೆಗೆ ಭಾರೀ ಮಳೆ ಸಾಧ್ಯತೆ - ಹೈದರಾಬಾದ್ ಪ್ರವಾಹ 2020 ಸುದ್ದಿ
ತೆಲಂಗಾಣದ ಹೈದರಾಬಾದ್ನಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಹ ಹಲವೆಡೆ ಮಳೆ ಸುರಿದಿದೆ.
ಬೆಳ್ಳಂಬೆಳಗ್ಗೆ ಮುತ್ತಿನನಗರಿಯಲ್ಲಿ ಮತ್ತೆ ವರುಣನ ಆರ್ಭಟ
ವಾಯುಭಾರ ಕುಸಿತ ಹಿನ್ನೆಲೆ ದಕ್ಷಿಣ ಭಾರತದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಅಕ್ಟೋಬರ್ 22ರವರೆಗೆ ತೆಲಂಗಾಣದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಸೂಚನೆ ಮೇರೆಗೆ ಜಿಹೆಚ್ಎಂಸಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಹಾನಿಗೀಡಾಗುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ನಗರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.