ಕರ್ನಾಟಕ

karnataka

ETV Bharat / bharat

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆಗೆ ಸಿದ್ಧ... ಪಾಕ್​ ಪಿಎಂ ಜತೆ ಜಂಟಿ ಸುದ್ದಿಗೋಷ್ಠಿ ವೇಳೆ ಟ್ರಂಪ್​​​ ಪುನರುಚ್ಚಾರ - ಜಮ್ಮು-ಕಾಶ್ಮೀರ ವಿಚಾರ

ಜಮ್ಮು-ಕಾಶ್ಮೀರ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಮತ್ತೊಮ್ಮೆ ಪುನರುಚ್ಚಾರ ಮಾಡಿದ್ದಾರೆ.

Donald Trump
ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆಗೆ ಸಿದ್ಧ

By

Published : Jan 22, 2020, 2:40 AM IST

Updated : Jan 22, 2020, 4:25 AM IST

ದಾವೋಸ್​:ಭಾರತ-ಪಾಕಿಸ್ತಾನದ ನಡುವೆ ಜಮ್ಮು-ಕಾಶ್ಮೀರ ವಿಚಾರವಾಗಿ ನಡೆಯುತ್ತಿರುವ ವಿವಾದದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಹೇಳಿದ್ದಾರೆ.

ದಾವೋಸ್​​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ವೇಳೆ ಟ್ರಂಪ್​ ಈ ಹೇಳಿಕೆ ಪುನರುಚ್ಚರಿಸಿದ್ದಾರೆ.

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆಗೆ ಸಿದ್ಧ

ಜಮ್ಮು-ಕಾಶ್ಮೀರ ವಿಚಾರವಾಗಿ ಭಾರತ-ಪಾಕ್​ ನಡುವೆ ನಡೆಯುತ್ತಿರುವ ಪ್ರತಿದಿನದ ವಿದ್ಯಮಾನಗಳ ಬಗ್ಗೆ ನಾವು ಸೂಕ್ಷ್ಮವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದು, ವಿವಾದ ಬಗೆಹರಿಸುವಲ್ಲಿ ನಾವು ಖಂಡಿತವಾಗಿ ನೆರವು ನೀಡಲು ಸಿದ್ಧ ಎಂದು ತಿಳಿಸಿದ್ದಾರೆ. ಇದೇ ವೇಳೆ ಅಗತ್ಯಬಿದ್ದರೆ ತಾವು ಪಾಕಿಸ್ತಾನಕ್ಕೂ ಭೇಟಿ ನೀಡುವುದಾಗಿ ಹೇಳಿಕೆ ನೀಡಿರುವ ಟ್ರಂಪ್​ ಭಾರತ-ಪಾಕ್​​ನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಭಾರತ ಜಮ್ಮು-ಕಾಶ್ಮೀರ ಸಮಸ್ಯೆ ದ್ವಿಪಕ್ಷೀಯವಾಗಿದ್ದು, ಸಮಸ್ಯೆ ಬಗೆಹರಿಸಲು ಬೇರೆ ದೇಶದ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ​​

Last Updated : Jan 22, 2020, 4:25 AM IST

ABOUT THE AUTHOR

...view details