ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 20 ರಂದು ಶಾಲಾ ಮಕ್ಕಳೊಂದಿಗೆ 'ಪರೀಕ್ಷಾ ಪೆ ಚರ್ಚಾ' ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಸಲಹೆಗಳು ಹಾಗೂ ಪ್ರಶ್ನೆಗಳನ್ನು ಕೇಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮುಂಬರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೇಗೆ ತಯಾರಾಗಬೇಕು, ಹೇಗೆ ಪರೀಕ್ಷಾ ಒತ್ತಡ ಕಡಿಮೆ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡುವ ಪಿಎಂ ಮೋದಿಯ 'ಪರೀಕ್ಷಾ ಪೆ ಚರ್ಚಾ'ದ ಮೂರನೇ ಆವೃತ್ತಿ ಜ.20 ರಂದು ಟಾಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕೇವಲ 9 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ತಮ್ಮ ಸಲಹೆ ಹಾಗೂ ಪ್ರಶ್ನೆಗಳನ್ನುhttp://bit.ly/_PPC2020 ಈ ಲಿಂಕ್ಗೆ ಹೋಗಿ ಕಳುಹಿಸಬಹುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (MHRD) ಟ್ವೀಟ್ ಮಾಡಿದೆ.