ಗೋವಾ/ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್ ಆವರಣದಲ್ಲಿ ಸೈಕಲ್ ಸವಾರಿ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಗೋವಾಗೆ ಶಿಫ್ಟ್ ಆಗಿದ್ದರು. ಕಳೆದ ಒಂದು ವಾರದಿಂದ ಗೋವಾದಲ್ಲಿ ಉಳಿದುಕೊಂಡಿರುವ ಅವರು ಫುಲ್ ವರ್ಕೌಟ್ ಮಾಡುತ್ತಿದ್ದಾರೆ. ಜೊತೆಗೆ ಸೈಕ್ಲಿಂಗ್ ಹಾಗೂ ಜಾಗಿಂಗ್ ಮಾಡುವ ಮೂಲಕ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.