ನವದೆಹಲಿ:ಕೇರಳದ ಕೋಯಿಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ದುರಂತದಲ್ಲಿ 17 ಜನ ಮೃತಪಟ್ಟು ನೂರಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡಕ್ಕೆ ರಾಜಕೀಯ ನಾಯಕರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರಿಪುರದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಬಗ್ಗೆ ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿ, ಈ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ನಮ್ಮ ಭಾವನೆಗಳೆಲ್ಲವೂ ಪ್ರಯಾಣಿಕರು ಮತ್ತು ಅವರ ಕುಟುಂಬಗಳೊಂದಿಗಿವೆ. ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕೇರಳದ ಕೋಯಿಕೋಡ್‌ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾರಾಟದ ದುರಂತ ವಿಮಾನ ಅಪಘಾತದ ಬಗ್ಗೆ ಕೇಳಿ ತೀವ್ರ ಸಂಕಟವಾಗಿದೆ. ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿ ವಿಚಾರಿಸಿದ್ದೇನೆ. ಮೃತ ಪ್ರಯಾಣಿಕರ, ಸಿಬ್ಬಂದಿ ಸದಸ್ಯರ ಮತ್ತು ಅವರ ಕುಟುಂಬಗಳಿಗೆ ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಬರೆದುಕೊಂಡಿದ್ದಾರೆ.