ಕರ್ನಾಟಕ

karnataka

ETV Bharat / bharat

ಹಲವು ಮಹತ್ತರ ಬೆಳವಣಿಗೆ.. ಶ್ರೀನಗರಕ್ಕೆ ಅಜಿತ್ ದೋವಲ್ ಎಂಟ್ರಿ! - ರಾಷ್ಟ್ರೀಯ ಭದ್ರತಾ ಸಲಹೆಗಾರ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಶ್ರೀನಗರಕ್ಕೆ ಭೇಟಿ ನೀಡಿದ್ದು, ಕಣಿವೆ ರಾಜ್ಯದ ಸದ್ಯದ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಅಜಿತ್ ದೋವಲ್

By

Published : Sep 25, 2019, 8:10 PM IST

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಶ್ರೀನಗರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಸಂವಿಂಧಾನದ 370ನೇ ವಿಧಿ ರದ್ದು ಮಾಡಿದಾಗಿನಿಂದ ಭದ್ರತಾ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಬೀಡು ಬಿಟ್ಟು ಪರಿಸ್ಥಿತಿಯನ್ನ ನಿಯಂತ್ರಿಸುತಿದ್ದ ದೋವಲ್ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡಿದ್ದರು.

ಇದೀಗ ಮತ್ತೆ ಶ್ರೀನಗರಕ್ಕೆ ಭೇಟಿ ನೀಡಿರುವ ಅಜಿತ್ ದೋವಲ್ ಸದ್ಯದ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಭದ್ರತಾ ಪಡೆ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಎಂಟರಿಂದ ಹತ್ತು ಜೈಶ್ ಉಗ್ರರು ಜಮ್ಮು ಕಾಶ್ಮೀರದ ವ್ಯಾಪ್ತಿಯಲ್ಲಿರುವ ವಾಯುನೆಲೆ ಮೇಲೆ ಆತ್ಮಾಹುತಿ ದಾಳಿ ನಡೆಸಲು ಸಜ್ಜಾಗಿದ್ದಾರೆ ಗುಪ್ತಚರ ಇಲಾಖೆ ಮಾಹಿತಿ ರವಾನಿಸಿದೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ABOUT THE AUTHOR

...view details