ಚಂಡೀಗಢ:ಕೇಂದ್ರ ಸರ್ಕಾರ ಜಾರಿಗೊಳಿಸಲು ನಿರ್ಧರಿಸಿರುವ ಹೊಸ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಪಂಜಾಬ್ನಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಪ್ರೊಟೆಸ್ಟ್ನಲ್ಲಿ ಭಾಗಿಯಾಗಿದ್ದ ಕೇಂದ್ರದ ಮಾಜಿ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ: ಮಾಜಿ ಸಚಿವೆ ಹರ್ಸಿಮ್ರತ್ ಕೌರ್ ಬಂಧನ! - ಮಾಜಿ ಸಚಿವೆ ಹರ್ಸಿಮ್ರತ್ ಕೌರ್ ಬಂಧಿಸಿದ ಪೊಲೀಸರು
ಕೃಷಿ ಮಸೂದೆಗೆ ಪಂಜಾಬ್ನಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಶಿರೋಮಣಿ ಅಕಾಲಿ ದಳದ ಹರ್ಸಿಮ್ರತ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
Akali leader Harsimrat Badal detained
ಶಿರೋಮಣಿ ಅಕಾಲಿ ದಳ ಈಗಾಗಲೇ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು, ಕೃಷಿ ಮಸೂದೆ ವಿಚಾರವಾಗಿ ಹರ್ಸಿಮ್ರತ್ ಕೌರ್ ಬಾದಲ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.
ರೈತರ ಹಕ್ಕುಗಳ ಬಗ್ಗೆ ಪ್ರತಿಭಟನೆ ನಡೆಸುತ್ತಿರುವುದಾಗಿ ನಮ್ಮನ್ನ ಬಂಧನ ಮಾಡಲಾಗಿದ್ದು, ನಾವು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಅಕಾಲಿ ದಳ ಇಂದು ಬೆಳಗ್ಗೆಯಿಂದ ಕಿಸಾನ್ ಮೋರ್ಚಾ ಆರಂಭಿಸಿದೆ.