ಮುಂಬೈ:ದೇಶದಲ್ಲಿ ಸಂಕಷ್ಟಕ್ಕೀಡಾದವರಿಗೆ ಸಹಾಯ ಮಾಡುವಲ್ಲಿ ನಟ ಅಕ್ಷಯ್ ಕುಮಾರ್ ಎಂದೂ ಹಿಂದೆ ಬಿದ್ದಿಲ್ಲ. ಹಲವು ಬಾರಿ ನೆರವು ನೀಡಿರುವ ಬಾಲಿವುಡ್ ನಟ, ಇದೀಗ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬಿಹಾರ ಮತ್ತು ಅಸ್ಸೋಂ ರಾಜ್ಯಗಳಿಗೆ ತಲಾ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಬಿಹಾರ ಮತ್ತು ಅಸ್ಸೋಂ ಮುಖ್ಯಮಂತ್ರಿಗಳೊಂದಿಗೆ ಪ್ರವಾಹ ಪರಿಸ್ಥಿತಿಗಳ ಬಗ್ಗೆ ನಟ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ನೈಸರ್ಗಿಕ ವಿಪತ್ತಿನಿಂದ ಸಂಕಷ್ಟಕ್ಕೆ ಸಿಲುಕಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ಒಂದು ಕೋಟಿ ರೂಪಾಯಿ ನೀಡಿದ್ದಾರೆ.