ಸಂಗಾರೆಡ್ಡಿ(ತೆಲಂಗಾಣ): ದೇಶದಲ್ಲಿ ಲಾಕ್ಡೌನ್ ಮುಂದುವರಿಕೆಯಾಗಿರುವ ಕಾರಣ ಸರಿಯಾದ ಕೆಲಸವಿಲ್ಲದೇ ಅನೇಕರು ಒಂದು ಹೊತ್ತಿನ ಊಟಕ್ಕೂ ತೊಂದರೆ ಪಡುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಮಧ್ಯೆ ಕುಡುಕ ತಂದೆಯೊಬ್ಬ ತನ್ನ ಮಗಳನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪುಲ್ಕಲ್ ಮಂಡಲ್ನ ಗೊಂಗುಲೂರ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿನ ಎಲ್ಲ ಮಕ್ಕಳಿಗೂ ದುಡಿದು ಹಾಕಲು ಸಾಧ್ಯವಾದಂತಹ ಸ್ಥಿತಿ ನಿರ್ಮಾಣಗೊಂಡಿದ್ದರಿಂದ ಮೂವರು ಮಕ್ಕಳಲ್ಲಿ ಓರ್ವ ಮಗಳನ್ನ ಕೊಲೆ ಮಾಡಿದ್ದಾನೆ.
ಅಜ್ಜಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನ ರಾತ್ರಿ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ. ಮದ್ಯ ವ್ಯಸನಿಯಾಗಿದ್ದ ಜೀವನ್ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದನು. ಲಾಕ್ಡೌನ್ ವೇಳೆ ಮೂರು ಮಕ್ಕಳನ್ನ(ಇಬ್ಬರು ಹೆಣ್ಣು ಮಕ್ಕಳು, ಓರ್ವ ಗಂಡು ಮಗು) ಸಾಕುವುದು ಕಷ್ಟವಾಗಿತ್ತು. ಜತೆಗೆ ಹೆಂಡತಿ, ತಾಯಿ ಕೂಡ ತನ್ನೊಂದಿಗೆ ಇದ್ದ ಕಾರಣ ಈ ನಿರ್ಧಾರ ಮಾಡಿದ್ದಾಗಿ ಹೇಳಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಜೀವನ್ ಪತ್ನಿ ರೇಣುಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಈಗಾಗಲೇ ಆತನ ಬಂಧನ ಮಾಡಿರುವ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾಗಿ ತಿಳಿಸಿದ್ದಾರೆ.