ಲಖನೌ:ಉತ್ತರ ಪ್ರದೇಶದಿಂದ ರಾಜ್ಯಸಭೆಗೆ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನವೆಂಬರ್ 9 ರಂದು ರಾಜ್ಯದಲ್ಲಿ ಒಟ್ಟು 11 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಬಿಎಸ್‌ಪಿ ಅಭ್ಯರ್ಥಿಯೊಬ್ಬರು ನಾಮಪತ್ರ ಹಿಂಪಡೆದುಕೊಂಡಿದ್ದರಿಂದ ಉಳಿದ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೀಗ ಆಯ್ಕೆಯಾದವರಲ್ಲಿ ಬಿಜೆಪಿಯ 8, ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಒಬ್ಬರು ಹಾಗೂ ಸಮಾಜವಾದಿ ಪಕ್ಷದ (ಎಸ್‌ಪಿ) ಒಬ್ಬರು ಅಭ್ಯರ್ಥಿಗಳಿದ್ದಾರೆ.
ಬಿಎಸ್‌ಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದುಕೊಳ್ಳಲು ಕಾರಣ:
ಚುನಾವಣಾ ಕಣದಲ್ಲಿದ್ದ ಬಿಎಸ್‌ಪಿ ಅಭ್ಯರ್ಥಿ ವಿರುದ್ಧ ಪಕ್ಷದ ಶಾಸಕರೇ ಬಂಡಾಯವೆದ್ದು, ಬೆಂಬಲವನ್ನು ಹಿಂತೆಗೆದುಕೊಂಡಿದ್ದರು. ಹೀಗಾಗಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಏಳು ರೆಬೆಲ್ ಶಾಸಕರನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅಮಾನತುಗೊಳಿಸಿದ್ದು, ಇದರ ಹಿಂದೆ ಸಮಾಜವಾದಿ ಪಕ್ಷದ ಕೈವಾಡವಿದೆ ಎಂದು ದೂರಿದ್ದಾರೆ.