ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿರುವ ರಾಹುಲ್ ಗಾಂಧಿ ಅವರನ್ನು ಇಂದು ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಳು ಭೇಟಿ ಮಾಡಲಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ಸಸತ 2 ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿದೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ನಿರ್ಧಾರ ಮಾಡಿದ್ದಾರೆ.
ರಾಹುಲ್ ರಾಜೀನಾಮೆ ನಿರ್ಧಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಬೇಸರ ತರಿಸಿದೆ. 200ಕ್ಕೂ ಹೆಚ್ಚು ಕೈ ನಾಯಕರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ತಮ್ಮ ರಾಜೀನಾಮೆ ನಿರ್ಧಾರವನ್ನ ಕೈ ಬಿಟ್ಟು ಪಕ್ಷವನ್ನ ಮುನ್ನಡೆಸಬೇಕು ಎಂದು ಒತ್ತಾಯಿಸಲು ಐದು ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಇಂದು ರಾಹುಲ್ ಗಾಂಧಿಯನ್ನ ಭೇಟಿ ಮಾಡಲಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ, ಕ್ಯಾಪ್ಟನ್ ಅಮರೀಂದರ್ ಸಿಂಗ್, ಮಧ್ಯಪ್ರದೇಶ ಸಿಎಂ ಕಮಲ್ ನಾಥ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತಿಸ್ಗಢ ಸಿಎಂ ಭೂಪೇಶ್ ವಘೇಲ್ ಸೇರಿದಂತೆ ಪುದುಚೇರಿ ಸಿಎಂ ನಾರಾಯಣ ಸ್ವಾಮಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.