ನವದೆಹಲಿ:ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಮನೆಯಲ್ಲೇ ಪ್ರಾರ್ಥಿಸಿ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.
'ಮನೆಯಲ್ಲೇ ನಮಾಜ್ ಮಾಡಿ': ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ - ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ
ಸಹ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಮುಸ್ಲಿಮರು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದೆ.
ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಿ
ಕೊರೊನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಶಿಫಾರಸ್ಸು ಮಾಡಲಾಗಿದೆ. ಪ್ರಾರ್ಥನೆಗಾಗಿ ಹೊರಬರಬೇಡಿ. ನಮ್ಮ ಸಹ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಟ್ವೀಟ್ ಮಾಡಿದೆ.
ಹಾಗೆಂದ ಮಾತ್ರಕ್ಕೆ ಮಸೀದಿಯನ್ನು ಸಂಪೂರ್ಣವಾಗಿ ತ್ಯಜಿಸಬೇಡಿ. ಮಸೀದಿ ನಿಯಮದ ಪ್ರಕಾರ, ಕನಿಷ್ಠ ನಾಲ್ಕು ಮಂದಿಯಾದರೂ ಪ್ರಾರ್ಥನೆಯನ್ನು ಸಲ್ಲಿಸಲು ಮಸೀದಿಯಲ್ಲಿ ಉಳಿಯುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದೆ.