ಅಲಹಾಬಾದ್:ಪ್ರಧಾನಿ ನರೇಂದ್ರ ಮೋದಿಗೆ ಅಲಹಾಬಾದ್ ಹೈಕೋರ್ಟ್ ನಿನ್ನೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಬಿಎಸ್ಎಫ್ ಯೋಧ ತೇಜ್ ಬಹಾದೂರ್, ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಸವಾಲಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಪ್ರಧಾನಿಗೆ ನೋಟಿಸ್ ಜಾರಿ ಮಾಡಿದೆ.