ತ್ರಿಶೂರ್(ಕೇರಳ): ಕೇರಳದ ತ್ರಿಶೂರ್ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ ಕಟ್ಟಿ ಹಾಕಿರುವ ವಿಡಿಯೋ ವೈರಲ್ ಆಗಿದೆ.
ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ: ಆಸ್ಪತ್ರೆಯಲ್ಲಿನ ಮಂಚಕ್ಕೆ ಕಟ್ಟಿ ಹಾಕಿದ ಆರೋಪ! - ಶೂರ್ ವೈದ್ಯಕೀಯ ಕಾಲೇಜ್ ಆಸ್ಪತ್ರೆ ಸುದ್ದಿ
ಕೋವಿಡ್ ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರನ್ನು ಅಲ್ಲಿನ ಮಂಚಕ್ಕೆ ಕಟ್ಟಿ ಹಾಕಲಾಗಿದ್ದು, ಅದರಿಂದ ಬಿದ್ದ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.
ತ್ರಿಶೂರ್ನ ವೈದ್ಯಕೀಯ ಕಾಲೇಜ್ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ರೋಗಿಯ ಕೈಯನ್ನ ಮಂಚಕ್ಕೆ ಕಟ್ಟಿ ಹಾಕಿದ್ದರಿಂದ ಎದ್ದೇಳಲು ಪ್ರಯತ್ನಿಸಿರುವ ಮಹಿಳೆ ಹಾಸಿಗೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಆಕೆಯ ಸಂಬಂಧಿಕರು ಜಿಲ್ಲಾ ವೈದ್ಯಕೀಯ ಅಧಿಕಾರಿ ಹಾಗೂ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ.
ನೆಲದ ಮೇಲೆ ಬಿದ್ದಿರುವ ಕಾರಣ ಮಹಿಳೆಯ ತಲೆ ಹಾಗೂ ಕಣ್ಣಿನ ಭಾಗಕ್ಕೆ ಗಂಭೀರವಾದ ಗಾಯಗಳಾಗಿವೆ. ಇದರ ಜತೆಗೆ ಮುಖದ ವಿವಿಧ ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ತಿಳಿದು ಬಂದಿದೆ. ಇದರ ವಿಡಿಯೋವನ್ನು ಅದೇ ವಾರ್ಡ್ನಲ್ಲಿದ್ದ ಮತ್ತೊಬ್ಬ ರೋಗಿ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.