ಕರ್ನಾಟಕ

karnataka

ETV Bharat / bharat

ಕೊರೊನಾ ಭೀತಿ ನಡುವೆಯೂ ಜು. 1 ರಿಂದ ಅಲಯನ್ಸ್ ಏರ್ ಹಾರಾಟ - ಏರ್ ಇಂಡಿಯಾದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಅಲೈಯನ್ಸ್ ಏರ್

ಏರ್ ಇಂಡಿಯಾದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಅಲೈಯನ್ಸ್ ಏರ್, ಜುಲೈ 1 ರಿಂದ ಮೈಸೂರು ಮುಖಾಂತರ ಬೆಂಗಳೂರಿನಿಂದ ಗೋವಾಕ್ಕೆ ವಿಮಾನ ಹಾರಾಟ ನಡೆಸಲು ತೀರ್ಮಾನಿಸಿದೆ.

Alliance Air to commence Bengaluru-Goa ops
ಅಲಯನ್ಸ್ ಏರ್ ಹಾರಾಟ

By

Published : Jun 26, 2020, 4:36 AM IST

ನವದೆಹಲಿ: ಏರುತ್ತಿರುವ ಕೋವಿಡ್ -19 ಪ್ರಕರಣಗಳ ನಡುವೆಯೂ ಏರ್ ಇಂಡಿಯಾದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಅಲೈಯನ್ಸ್ ಏರ್, ಜುಲೈ 1 ರಿಂದ ಮೈಸೂರು ಮುಖಾಂತರ ಬೆಂಗಳೂರಿನಿಂದ ಗೋವಾಕ್ಕೆ ವಿಮಾನ ಹಾರಾಟ ನಡೆಸಲು ತೀರ್ಮಾನಿಸಿದೆ.

ವಿಮಾನಯಾನ ಸಂಸ್ಥೆಯ ಪ್ರಕಾರ, ಬೆಂಗಳೂರು-ಗೋವಾಕ್ಕೆ ಪ್ರಯಾಣದ ವೆಚ್ಚ 3,283 ರೂ.ನಿಂದ ಆರಂಭವಾಗಲಿದೆ. ವಿಮಾನಯಾನವು ಸರ್ಕಾರದ ಎಲ್ಲಾ ಮಾರ್ಗಸೂಚಿಗಳಿಗೆ ಬದ್ಧವಾಗಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ ಎಲ್ಲಾ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಮಾನದೊಳಗೆ ಮತ್ತು ಚೆಕ್-ಇನ್, ಆಗಮನ ಮತ್ತು ನಿರ್ಗಮನ ಸಮಯದಲ್ಲಿ ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ಹಾರಾಟದ ನಂತರ ವಿಮಾನವನ್ನು ಸೋಂಕು ರಹಿತಗೊಳಿಸಲಾಗುತ್ತಿದ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details