ನವದೆಹಲಿ: ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್(ಆರ್‌ಎಎಫ್)ನ 28ನೇ ವಾರ್ಷಿಕೋತ್ಸವದ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಡೆಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭ ಕೋರಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸುವಲ್ಲಿ ಆರ್‌ಎಎಫ್ ಗುರುತಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅದು ಯಶಸ್ವಿಯಾಗಿದೆ. ಹಲವು ಮಾನವೀಯ ಕಾರ್ಯಗಳು ಮತ್ತು ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿಯೂ ಈ ಪಡೆಯ ಬದ್ಧತೆಯು ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆಯೆಂದು ಟ್ವೀಟ್‌ನಲ್ಲಿ ಗುಣಗಾನ ಮಾಡಿದ್ದಾರೆ.