ಕರ್ನಾಟಕ

karnataka

ETV Bharat / bharat

ಕೆಳಮನೆಗೆ ಎಂಟ್ರಿ, ಮೇಲ್ಮನೆಗೆ ರಾಜೀನಾಮೆ: ಅಮಿತ್ ಶಾ,ರವಿಶಂಕರ್ ಪ್ರಸಾದ್,ಕನ್ನಿಮೋಳಿ

ತವರು ರಾಜ್ಯ ಗುಜರಾತ್​ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದ ಅಮಿತ್ ಶಾ ಅವರು, 17ನೇ ಲೋಕಸಭಾ ಚುನಾವಣೆಯಲ್ಲಿ ಎಲ್​.ಕೆ. ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿ ನಗರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

ಸಾಂದರ್ಭಿಕ ಚಿತ್ರ

By

Published : May 29, 2019, 3:15 PM IST

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸಂಸತ್‌ಗೆ ಆಯ್ಕೆಯಾಗಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ತವರು ರಾಜ್ಯ ಗುಜರಾತ್​ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದ ಅಮಿತ್ ಶಾ ಅವರು, 17ನೇ ಲೋಕಸಭಾ ಚುನಾವಣೆಯಲ್ಲಿ ಎಲ್​.ಕೆ. ಅಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿ ನಗರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹಾಗೂ ತಮಿಳುನಾಡಿನ ಡಿಎಂಕೆ ಪಕ್ಷದ ವರಿಷ್ಠೆ ಕನ್ನಿಮೋಳಿ ಕೂಡ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರವಿಶಂಕರ್ ಪ್ರಸಾದ್ ಪಟ್ನಾ ಸಾಹೀಬ್‌ನಿಂದ ಸ್ಪರ್ಧಿಸಿ ಗೆಲುವು ಪಡೆದರೆ, ಅಮಿತ್ ಶಾ ಗುಜರಾತ್ನ ಗಾಂಧಿನಗರ ಹಾಗು ಕನ್ನಿಮೋಳಿ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

For All Latest Updates

TAGGED:

ABOUT THE AUTHOR

...view details