ನವದೆಹಲಿ: ಕೋವಿಡ್ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಗುಣಮುಖರಾಗಿ ಡಿಸ್ಚಾರ್ಚ್ ಆಗಿದ್ದಾರೆ. ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಅಮಿತಾಬ್ ಬಚ್ಚನ್ಗೆ ಕೋವಿಡ್ ನೆಗೆಟಿವ್... ಅಮಿತ್ ಶಾಗೆ ಪಾಸಿಟಿವ್..! - Amit Shah tests positive
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ದೃಢವಾಗಿದ್ದು, ನಟ ಅಮಿತಾಬ್ ಬಚ್ಚನ್ ಅವರು ಸೋಂಕಿನಿಂದ ಗುಣಮುಖರಾಗಿದ್ದಾರೆ.
![ಅಮಿತಾಬ್ ಬಚ್ಚನ್ಗೆ ಕೋವಿಡ್ ನೆಗೆಟಿವ್... ಅಮಿತ್ ಶಾಗೆ ಪಾಸಿಟಿವ್..! Amit Shah tests positive, Amitabh Bachchan tests negative for covid 19](https://etvbharatimages.akamaized.net/etvbharat/prod-images/768-512-8268835-thumbnail-3x2-megha.jpg)
ಈ ಕುರಿತು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಅಮಿತ್ ಶಾ, ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣ ನಾನು ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ, ಆದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕ್ವಾರಂಟೈನ್ನಲ್ಲಿರಿ ಎಂದು ಮನವಿ ಮಾಡಿದ್ದಾರೆ.
ಕೊರೊನಾಗೆ ಒಳಗಾಗಿ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಮಿತಾಬ್ ಬಚ್ಚನ್ ಗುಣಮುಖರಾಗಿದ್ದಾರೆ. ನಮ್ಮ ತಂದೆಯ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಪುತ್ರ ಅಭಿಷೇಕ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.