ನವದೆಹಲಿ :ಸಿಎಎ ಪರ-ವಿರೋಧದ ಪ್ರತಿಭಟನೆ ದೆಹಲಿಯ ಈಶಾನ್ಯ ಜಿಲ್ಲೆಗಳಲ್ಲಿ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶಾಂತತೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಈಗಾಗಲೇ ಗೃಹ ಸಚಿವ ಅಮಿತ್, ಲೆಫ್ಟಿನೆಂಟ್ ಗೌವರ್ನರ್ ಅನಿಲ್ ಬೈಜಾಲ್, ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್, ಹಿರಿಯ ಕಾಂಗ್ರೆಸ್ ನಾಯಕ ಸುಭಾಷ್ ಚೋಪ್ರಾ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಕೇಜ್ರಿವಾಲ್ ಸಭೆ ನಡೆಸಿ, ಮುಂದಿನ ಕ್ರಮಗಳ ಕುರಿತು ಚರ್ಚಿಸುತ್ತಿದ್ದಾರೆ.
ಈಗಾಗಲೇ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ 7 ಜನರು ಈ ಗಲಭೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಗಡಿ ಭಾಗದಿಂದ ನುಸುಳುಕೋರರು ಪ್ರವೇಶಿಸುತ್ತಿದ್ದಾರೆ. ಅಲ್ಲಿ ಹೆಚ್ಚಿನ ಭದ್ರತೆ ನೀಡುವ ಅವಶ್ಯಕತೆ ಇದೆ ಎಂದು ಗಡಿ ಕ್ಷೇತ್ರದ ಶಾಸಕರು ಹಾಗೂ ಜನರು ಮಾಹಿತಿ ನೀಡಿದ್ದಾರೆ ಎಂದರು.