ಅಮೃತಸರ: ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿರುವ ಘಟನೆ ಪಂಜಾಬ್ನ ಅಮೃತಸರದ ಗುರುನಾನಕ್ಪುರ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಅಮೃತಸರದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿತ: ಮೂವರು ಬಲಿ - ಅಮೃತಸರದ ಗುರುನಾನಕ್ ಪುರ ಪ್ರದೇಶ
ಪಂಜಾಬ್ನ ಅಮೃತಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗುರುನಾನಕ್ಪುರ ಪ್ರದೇಶದಲ್ಲಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟಿದ್ದಾರೆ.
ಅಮೃತಸರದಲ್ಲಿ ಕಟ್ಟಡ ಕುಸಿತ
ರಾಜ್ಯದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಹಿನ್ನೆಲೆ ಮೇಲ್ಛಾವಣಿ ಕುಸಿದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್ನ ಅನೇಕ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಮುಂದಿನ ನಾಲ್ಕು ದಿನಗಳವರೆಗೆ ಮಧ್ಯ ಮತ್ತು ಉತ್ತರ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮುನ್ಸೂಚನೆ ನೀಡಿತ್ತು.