ವಿಜಯವಾಡ(ಆಂಧ್ರಪ್ರದೇಶ):ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಬಂದ್ ಆಗಿದ್ದ ಶಾಲೆಗಳು ಇದೀಗ ಆಂಧ್ರಪ್ರದೇಶದಲ್ಲಿ ನವೆಂಬರ್ 2ರಿಂದ ರೀ ಓಪನ್ ಆಗಲಿದ್ದು, ಅದಕ್ಕಾಗಿ ಮಾರ್ಗಸೂಚಿ ರಿಲೀಸ್ ಮಾಡಲಾಗಿದೆ.
ಇದೇ ವಿಚಾರವಾಗಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ, ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ 148 ದಿನಗಳ ಶೈಕ್ಷಣಿಕ ವರ್ಷ ನಡೆಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಎರಡು ದಿನಗಳಿಗೊಮ್ಮೆ ಕ್ಲಾಸ್ ನಡೆಸಲು ನಿರ್ಧಾರ ಮಾಡಲಾಗಿದೆ. ಅದರಂತೆ 1,3,5,7,9 ಕ್ಲಾಸ್ ವಿದ್ಯಾರ್ಥಿಗಳಿಗೆ ಒಂದು ದಿನ ಹಾಗೂ 2,4,6,8 ತರಗತಿ ವಿದ್ಯಾರ್ಥಿಗಳಿಗೆ ಮತ್ತೊಂದು ದಿನ ಕ್ಲಾಸ್ ನಡೆಯಲಿವೆ.