ಅಮರಾವತಿ:ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಇತರ ಏಜೆನ್ಸಿಗಳ ಸಹಾಯದಿಂದ ತಯಾರಿಸಲಾದ ಟ್ರ್ಯಾಕಿಂಗ್ ವ್ಯವಸ್ಥೆ ಮೂಲಕ ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ಆಂಧ್ರ ಪ್ರದೇಶ ಸರ್ಕಾರ ನಿಗಾ ಇಡಲಿದೆ. ಜೊತೆಗೆ ಹೋಂ ಕ್ವಾರಂಟೈನ್ನಲ್ಲಿರುವ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನೂ ಇದರ ಮೂಲಕ ತಿಳಿದುಕೊಳ್ಳಬಹುದಾಗಿದೆ.
'ಕೋವಿಡ್ ಅಲರ್ಟಿಂಗ್ ಟ್ರ್ಯಾಕಿಂಗ್ ವ್ಯವಸ್ಥೆ' ಎಂದು ಕರೆಯಲ್ಪಡುವ ಈ ವ್ಯವಸ್ಥೆಯಲ್ಲಿ ಟೆಲಿಕಾಂ ಸೇವಾ ಪೂರೈಕೆದಾರರು ಮತ್ತು ಮೊಬೈಲ್ ಟವರ್ ಸಿಗ್ನಲ್‌ಗಳ ಸಹಾಯದಿಂದ ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ನಿಗಾ ಇಡಲಾಗುತ್ತದೆ.