ಚೆನ್ನೈ(ತಮಿಳುನಾಡು): ಈ ಹಿಂದೆ ತಾಂತ್ರಿಕ ತೊಂದರೆಗಳಿಂದಾಗಿ ಪದವಿ-ಸ್ನಾತಕೋತ್ತರ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅಣ್ಣಾ ವಿಶ್ವವಿದ್ಯಾಲಯ ಆನ್‌ಲೈನ್ ಮೂಲಕ ಮರು ಪರೀಕ್ಷೆ ನಡೆಸಲಿದೆ.
ಪರಿಷ್ಕೃತ ಬಳಕೆದಾರರ ಕೈಪಿಡಿಯಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಸಮಸ್ಯೆಗಳನ್ನು ಅನುಭವಿಸಿದ್ರೆ, ಬಳಿಕ ಪೆನ್ ಮತ್ತು ಪೇಪರ್ ಮೂಲಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ ಹೇಳಿದೆ. ಮೊದಲ ಪ್ರಯತ್ನದಲ್ಲಿಯೇ ಪರೀಕ್ಷೆ ಪೂರ್ಣಗೊಳಿಸುವಂತೆ ವಿಶ್ವವಿದ್ಯಾಲಯವು ಅಭ್ಯರ್ಥಿಗಳಿಗೆ ಸಲಹೆ ನೀಡಿದೆ. ವಿದೇಶಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂದು ತಿಳಿಸಿದೆ.