ಹೊಸದಿಲ್ಲಿ: ದೇಶದಲ್ಲಿನ ಕಟ್ಟಡ ನಿರ್ಮಾಣ ಕಾರ್ಮಿಕರಿಗಾಗಿ ತುರ್ತಾಗಿ ಸಹಾಯಧನ ಹಾಗೂ ಕಲ್ಯಾಣ ಕ್ರಮಗಳನ್ನು ಘೋಷಿಸಬೇಕೆಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಗ್ರಹಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಸೋನಿಯಾ, ರಾಜ್ಯಗಳಲ್ಲಿರುವ ಕಟ್ಟಡ ಕಾರ್ಮಿಕರಿಗೆ ತಕ್ಷಣ ಸಹಾಯ ದೊರಕಿಸಬೇಕೆಂದು ಮನವಿ ಮಾಡಿದ್ದಾರೆ.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತುರ್ತಾಗಿ ಸಹಾಯ ಮಾಡಿ: ಪ್ರಧಾನಿಗೆ ಸೋನಿಯಾ ಪತ್ರ - welfare measures
ದೇಶದಲ್ಲಿ ಬಿಕ್ಕಟ್ಟಿನ ಸ್ಥಿತಿ ಸೃಷ್ಟಿಯಾಗಿರುವುದರಿಂದ ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುವಂತಾಗಿದೆ. ರಾಜ್ಯಗಳಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕೇಂದ್ರ ಸರಕಾರ ತಕ್ಷಣ ಸಹಾಯ ನೀಡಲು ಮುಂದಾಗಬೇಕೆಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರಧಾನಿಗೆ ಮನವಿ ಮಾಡಿದ್ದಾರೆ.
sonia gandhi
ದೇಶಾದ್ಯಂತ ಕೊರೊನಾ ವೈರಸ್ ಬಿಕ್ಕಟ್ಟು ಮುಂದುವರೆದಿದ್ದು, ಎಲ್ಲೆಡೆ ದಿಗ್ಬಂಧನ ಜಾರಿಯಲ್ಲಿವೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ನಿಂತುಹೋಗಿದ್ದು, ಈ ವಲಯದ ಕಾರ್ಮಿಕರು ಉದ್ಯೋಗವಿಲ್ಲದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಅವರ ಪತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ.