ದೇಶದಲ್ಲಿಂದು ಮೂರನೇ ಬಲಿ ಪಡೆದ ಕೊರೊನಾ: ಕೊರೊನಾಸುರನಿಗೆ 26 ಬಲಿ..! - ಕೋವಿಡ್-19
12:59 March 29
ಮಹಾರಾಷ್ಟ್ರದಲ್ಲಿ ಕೊರೊನಾಗೆ ಏಳನೇ ಬಲಿ
ಮುಂಬೈ: 40 ವರ್ಷದ ಮಹಿಳೆಯೊಬ್ಬಳು ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಈ ಮಹಿಳೆ ತೀವ್ರ ಉಸಿರಾಟದ ತೊಂದರೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಳು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದು, ಇದರಿಂದಾಗಿ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಈ ರಾಜ್ಯದಲ್ಲೇ 193 ಮಂದಿ ಸೋಂಕಿತರಿದ್ದಾರೆ.
ಗುಜರಾತ್, ಜಮ್ಮು ಕಾಶ್ಮೀರದಲ್ಲಿ ತಲಾ ಒಂದು ಬಲಿ
ಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದು, ಜಮ್ಮು ಕಾಶ್ಮೀರದಲ್ಲಿ ಇದು ಎರಡನೇ ಪ್ರಕರಣವಾಗಿತ್ತು. ಇದಕ್ಕೂ ಮೊದಲು ಗುಜರಾತ್ನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ಕೋವಿಡ್-19ಗೆ ಬಲಿಯಾಗಿದ್ದ. ಈ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಅಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿತ್ತು.