ನವದೆಹಲಿ: ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಮತ್ತೋರ್ವ ಅಪರಾಧಿ ಇಂದು ರಾಷ್ಟ್ರಪತಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.
ನಿರ್ಭಯಾ ಪ್ರಕರಣ: ಇಂದು ಮತ್ತೋರ್ವ ಅಪರಾಧಿಯಿಂದ ಕ್ಷಮಾದಾನ ಅರ್ಜಿ ಸಲ್ಲಿಕೆ - Nirbhaya case convict filed a mercy petition
ಶಿಕ್ಷೆಗೆ ಎರಡು ದಿನ ಬಾಕಿಯಿರುವಾಗ ಅಪರಾಧಿ ವಿನಯ್ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ತಿರಸ್ಕರಿಸಿದ ಬೆನ್ನಲ್ಲೇ ಮತ್ತೋರ್ವ ಅಪರಾಧಿ ಅಕ್ಷಯ್ ಠಾಕೂರ್ ಇಂದು ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾನೆ.
ಶಿಕ್ಷೆಗೆ ಎರಡು ದಿನ ಬಾಕಿಯಿರುವಾಗ ಅಪರಾಧಿ ವಿನಯ್ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದ. ಆದರೆ ಅದನ್ನು ರಾಷ್ಟ್ರಪತಿ ರಾನ್ನಾಥ್ ಕೋವಿಂದ್ ತಿರಸ್ಕರಿಸಿದ ಬೆನ್ನಲ್ಲೇ ಮತ್ತೋರ್ವ ಅಪರಾಧಿ ಅಕ್ಷಯ್ ಠಾಕೂರ್ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾನೆ.
ಸುಪ್ರೀಂ ಕೋರ್ಟ್ ಫೆ.1 ರಂದು(ಇಂದು) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ನಿನ್ನೆ ದೆಹಲಿಯ ಪಟಿಯಾಲ್ ಹೌಸ್ ಕೋರ್ಟ್ ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯುವಂತೆ ಹೇಳಿದ್ದರಿಂದ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಇಂದು ಮತ್ತೋರ್ವ ಅಪರಾಧಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಗಲ್ಲುಶಿಕ್ಷೆ ಮತ್ತಷ್ಟು ದಿನ ಮುಂದೂಡುವ ಸಾಧ್ಯತೆಯಿದೆ.