ಯುಎಸ್ಎ:ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಭಾರತ-ಅಮೆರಿಕ ವಾಣಿಜ್ಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದು ರಾಜ್ಯದ ಆರ್ಥಿಕಾಭಿವೃದ್ದಿ ಹಿತದೃಷ್ಟಿಯಿಂದ ಮಹತ್ವದ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ರೆಡ್ಡಿ, ಕೃಷಿ ಮತ್ತು ಆಹಾರ ಭದ್ರತೆ, ಆರೋಗ್ಯ ರಕ್ಷಣೆ, ಶಿಕ್ಷಣ, ಮೂಲಸೌಕರ್ಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ಹೂಡಿಕೆ ಮತ್ತು ವ್ಯಾಪಾರ ಗುರಿ ಹೆಚ್ಚಿಸಲು ಆಂಧ್ರಪ್ರದೇಶದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
ಅಮೆರಿಕದಲ್ಲಿ ಆಂಧ್ರ ಸಿಎಂ ಬ್ಯುಸಿನೆಸ್ ಮಾತು ಆಂಧ್ರಪ್ರದೇಶದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಿರುವ ಅವರು, ಹೂಡಿಕೆದಾರರಿಗೆ ಸಕಲ ರೀತಿಯ ಸೌಲಭ್ಯ ಒದಗಿಸುವ ಭರವಸೆ ನೀಡಿದ್ದಾರೆ.
ಮಗಳನ್ನು ವಿಶ್ವವಿದ್ಯಾಲಯಕ್ಕೆ ಸೇರ್ಪಡೆ ಮಾಡುವ ಉದ್ದೇಶದಿಂದ ಖಾಸಗಿಯಾಗಿ ಪ್ರಯಾಣಿಸಿದ ಆಂಧ್ರ ಸಿಎಂ, ಅಲ್ಲಿನ ಉದ್ಯಮಿಗಳೊಂದಿಗೆ ಬ್ಯುಸಿನೆಸ್ ಟಾಕ್ ನಡೆಸಿದ್ದಾರೆ. ಈ ಸಭೆಯಲ್ಲಿ ಯುಎಸ್ ಚೇಂಬರ್ಸ್ ಆಫ್ ಕಾಮರ್ಸ್ನ ಹಿರಿಯ ಉಪಾಧ್ಯಕ್ಷ ರಾಬ್ ಶ್ರೋಡರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.