ಕರ್ನಾಟಕ

karnataka

ETV Bharat / bharat

ಅಂಧರ ಬಾಳಿಗೆ ಬೆಳಕು.. ಮತ್ತೊಂದು ಯೋಜನೆ ಘೋಷಣೆ ಮಾಡಿದ ಜಗನ್! - ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ

ಕಳೆದ ಕೆಲ ದಿನಗಳ ಹಿಂದೆ ಹಲವು ನೂತನ ಯೋಜನೆಗಳನ್ನ ಘೋಷಣೆ ಮಾಡಿದ್ದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತೊಂದು ಯೋಜನೆ ಘೋಷಣೆ ಮಾಡಿದ್ದಾರೆ.

ಸಿಎಂ ಜಗನ್ ಮೋಹನ್ ರೆಡ್ಡಿ

By

Published : Oct 11, 2019, 12:30 PM IST

ಅನಂತಪುರಂ(ಆಂಧ್ರಪ್ರದೇಶ): ಹಲವು ಭರವಸೆಗಳನ್ನ ನೀಡಿ ಅಧಿಕಾರಕ್ಕೆರಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತೊಂದು ಯೋಜನೆಯನ್ನ ಘೋಷಣೆ ಮಾಡಿದ್ದಾರೆ.

ನೂತನ 'ವೈಎಸ್​​ಆರ್ ಕಂಟಿ ವೆಲುಗು' ಸಾರ್ವತ್ರಿಕ ಕಣ್ಣಿನ ಆರೈಕೆ ಯೋಜನೆಯನ್ನ ಜಗನ್ ಘೋಷಣೆ ಮಾಡಿದ್ದಾರೆ. ಆಂಧ್ರಪ್ರದೇಶದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ಜನ ಕಣ್ಣಿನ ಸಮಸ್ಯೆಯಿಂದ ಬಳಲುತಿದ್ದಾರೆ. ಅವರೆಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಜಗನ್ ತಿಳಿಸಿದ್ದಾರೆ.

7 ನೂತನ ಮೆಡಿಕಲ್ ಕಾಲೇಜುಗಳನ್ನ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದ್ದು, 2022ರ ವೇಳೆಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೆ ಏರಿಸಲಾಗುವುದು ಎಂದಿದ್ದಾರೆ. ಈ ಹಿಂದೆ ಇದ್ದ ಆರೋಗ್ಯ ಶ್ರೀ ಇನ್ಷುರೆನ್ಸ್​ ಯೋಜನೆ ಅಡಿಯಲ್ಲಿ 1000 ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನು ಮುಂದೆ1200 ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ. ಈ ಮೂಲಕ ರಾಜ್ಯದ ಜನರ ಆರೋಗ್ಯ ಸ್ಥಿತಿ ಬಗ್ಗೆ ಎಲ್ಲ ಮಾಹಿತಿಯನ್ನ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.

ಇನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ರೋಗಿಗಳಿಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಪಿಂಚಣಿ ನೀಡಲು ತೀರ್ಮಾನಿಸಲಾಗಿದೆ. ಒಂದೇ ಬಾರಿ ಸುಮಾರು 70 ಲಕ್ಷ ವಿದ್ಯಾರ್ಥಿಗಳಿಗೆ ಕಣ್ಣಿನ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details