ಅಮರಾವತಿ(ಆಂಧ್ರಪ್ರದೇಶ): ಎರಡೂವರೆ ತಿಂಗಳಿನಿಂದ ಸ್ಥಗಿತವಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಪ್ರದೇಶ ಸರ್ಕಾರ ಅನುಮತಿ ನೀಡಿದೆ. ಪ್ರಾಯೋಗಿಕವಾಗಿ ಸ್ಥಳೀಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.
ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ - ದೇವರ ದರ್ಶನಕ್ಕೆ ಅನುಮತಿ
ಕಳೆದ ಎರಡೂವರೆ ತಿಂಗಳಿಂದ ಸ್ಥಗಿತವಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ ನೀಡಿದೆ. ಜೂನ್ 8 ರಿಂದ ಪ್ರಾಯೋಗಿಕವಾಗಿ ಸ್ಥಳೀಯರಿಗೆ ಅವಕಾಶ ಕಲ್ಪಿಸಲಾಗಿದೆ.
ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆಂಧ್ರ ಸರ್ಕಾರ ಅನುಮತಿ
ದರ್ಶನದ ವೇಳೆ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದೆ. ಟಿಟಿಡಿ ಇಒ ಬರೆದ ಪತ್ರಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಈ ನಿರ್ಧಾರವನ್ನು ಕೈಗೊಂಡಿದೆ.
ಲಾಕ್‌ಡೌನ್ ಸಡಿಲಿಕೆಯ ಭಾಗವಾಗಿ ಜೂನ್ 8 ರಿಂದ ದೇವಸ್ಥಾನ ಹಾಗೂ ಪ್ರಾರ್ಥನಾ ಮಂದಿರಗಳಿಗೆ ಭಕ್ತರ ಪ್ರವೇಶಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಮುಂದಿನ ಸೋಮವಾರದಿಂದ ತಿರುಪತಿ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ. ಮೇ 12 ರಂದು ಟಿಟಿಡಿ ಇಒ ಅನಿಲ್ ಕುಮಾರ್, ಅಲ್ಲಿನ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.