ಅಮರಾವತಿ :10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲಪು ಸುರೇಶ್ ಪ್ರಕಟಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ 10ನೇ ಕ್ಲಾಸ್ ಪರೀಕ್ಷೆ ರದ್ದು.. ಎಲ್ಲಾ ವಿದ್ಯಾರ್ಥಿಗಳು ಪಾಸ್!! - ಆಂಧ್ರಪ್ರದೇಶದಲ್ಲಿ 10ನೇ ತರಗತಿ ಪರೀಕ್ಷೆ ರದ್ದು
ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ 10ನೇ ತರಗತಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲು ನಿರ್ಧರಿಸಿದೆ..
ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಬಡ್ತಿ ನೀಡಲಾಗುವುದು. ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಪರೀಕ್ಷೆಗಳನ್ನು ನಡೆಸದೆ, ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡುವಂತೆ ಸೂಚಿಸಿದ್ದಾರೆ ಎಂದು ಸಚಿವ ಸುರೇಶ್ ಹೇಳಿದ್ದಾರೆ.
2020ರ ಜುಲೈ 10 ರಿಂದ 15ರವರೆಗೆ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಬೇಕಿತ್ತು. ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಈಗ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಈ ಹಿಂದೆ ಕೋವಿಡ್ -19 ನಿಯಮಾವಳಿಗಳನ್ನು ಅನುಸರಿಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಿತ್ತು.