ನವದೆಹಲಿ:ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಕಳೆದ 60 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಲ್ಲಿಯವರೆಗೆ ಅನೇಕ ಸುತ್ತಿನ ಮಾತುಕತೆ, ಟ್ರ್ಯಾಕ್ಟರ್ ಪರೇಡ್ನಂತಹ ಘಟನೆ ನಡೆದಿದ್ದರೂ ಯಾವುದೇ ರೀತಿಯ ಅಂತಿಮ ನಿರ್ಧಾರ ಹೊರಬಿದ್ದಿಲ್ಲ.
ಓದಿ: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಡ್ಯಾನ್ಸ್.. ವಿಡಿಯೋ!
ಇದೇ ವಿಚಾರವಾಗಿ ಇದೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರೈತರೊಂದಿಗೆ ಯುದ್ಧ ಮಾಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿರುವ ಪ್ರಿಯಾಂಕಾ ಗಾಂಧಿ, ದೆಹಲಿ ಗಡಿಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜನೆ ಮಾಡಿರುವ ವಿಡಿಯೋ ಕೂಡ ತಮ್ಮ ಟ್ವೀಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಮಸೂದೆ ಹಿಂಪಡೆದುಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ 18 ತಿಂಗಳ ಕಾಲ ಕಾಯ್ದೆಗಳನ್ನ ಅಮಾನತಿನಲ್ಲಿಡಲು ಸಿದ್ಧವಿರುವುದಾಗಿ ತಿಳಿಸಿದೆ.
ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಸೇತುವೆ ಬದಲು ಗೋಡೆ ನಿರ್ಮಾಣ ಮಾಡ್ತಿದೆ ಎಂದು ರೈತರ ವಿಚಾರವಾಗಿ ಟ್ವೀಟ್ ಮಾಡಿದ್ದರು.