ಕರ್ನಾಟಕ

karnataka

ETV Bharat / bharat

ಆಸ್ಪತ್ರೆಗೆ ನುಗ್ಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯನ್ನು ಕೊಂದ ದುಷ್ಕರ್ಮಿಗಳು - ಆಸ್ಪತ್ರೆಗೆ ನುಗ್ಗಿ ಕೊಲೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯನ್ನು ದುಷ್ಕರ್ಮಿಗಳು ಕೊಂದಿರುವ ಘಟನೆ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

rajaji government hospital
ರಾಜಾಜಿ ಸರ್ಕಾರಿ ಆಸ್ಪತ್ರೆ

By

Published : Jun 8, 2020, 11:48 AM IST

Updated : Jun 8, 2020, 2:34 PM IST

ಮಧುರೈ (ತಮಿಳುನಾಡು):ಮಾರಕಾಸ್ತ್ರಗಳನ್ನು ಹೊಂದಿದ ನಾಲ್ವರು ಆಸ್ಪತ್ರೆಗೆ ನುಗ್ಗಿ ಓರ್ವ ರೋಗಿಯನ್ನು ಕೊಂದಿರುವ ಬೆಚ್ಚಿಬೀಳಿಸುವ ಘಟನೆ ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಇಂದು ಬೆಳ್ಳಂ ಬೆಳಗ್ಗೆ ಈ ಘಟನೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ರೋಗಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ. ಆರೋಪಿಗಳ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿ.ಮುರುಗನ್​ ಎಂಬಾತ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ವಾರ್ಡ್ ನಂಬರ್ 101ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದರು.

ಹಳೇ ದ್ವೇಷ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಡಿಸಿಪಿ ಇ.ಕಾರ್ತಿಕ್​ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. 10 ಸಿಸಿಟಿವಿಗಳನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ

Last Updated : Jun 8, 2020, 2:34 PM IST

ABOUT THE AUTHOR

...view details