ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಾಕ್ನಿಂದ ಉಪಟಳ ಮುಂದುವರಿದಿದ್ದು, ಇಂದು ನಡೆದ ಗುಂಡಿನ ಕಾಳಗದಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಕಣಿವೆಯಲ್ಲಿ ನಿಲ್ಲದ ಉಗ್ರರ ಉಪಟಳ... ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ರದ್ದುಗೊಂಡ ಬಳಿಕ ಪಾಕ್ನಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದು, ಇಂದು ಸಹ ಅದು ತನ್ನ ನರಿ ಬುದ್ದಿ ತೋರಿಸಿದೆ.
ಭಾರತೀಯ ಯೋಧ ನಾಯ್ಕ ರವಿ ರಂಜನ್ ಕುಮಾರ್ ಸಿಂಗ್ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಗಡಿ ಪ್ರದೇಶದಲ್ಲಿ ಪಾಕ್ ಯೋಧರು ನಡೆಸಿದ ಗುಂಡಿನ ಕಾಳಗದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಲೆಪ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಪಾಕ್ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದು, ಕಳೆದ ಮೂರು ದಿನಗಳ ಹಿಂದೆ ರಜೌರಿ ಹಾಗೂ ಉರಿ ಸೆಕ್ಟರ್ನಲ್ಲಿ ನಡೆದ ಗುಂಡಿನ ದಾಳಿಯ ವೇಳೆ ಭಾರತೀಯ ಸೇನೆಯ ಯೋಧ ಲ್ಯಾನ್ಸ್ ನಾಯಕ ಸಂದೀಪ್ ಥಾಪಾ(35) ಹುತಾತ್ಮರಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಬಳಿಕ ಪಾಕ್ನಿಂದ ಮೇಲಿಂದ ಮೇಲೆ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದು, ಅದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಿದೆ.