ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಸೋಮವಾರ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ಸೇನಾಧಿಕಾರಿಯೋರ್ವರು (ಜೆಸಿಒ) ಹುತಾತ್ಮರಾಗಿದ್ದಾರೆ.
ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. ಕಳೆದ ಐದು ದಿನಗಳಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಸೇನೆಯ ನಾಲ್ವರು ಸಿಬ್ಬಂದಿ ಪ್ರಾಣ ಕಳೆದುಕೊಂಡಂತಾಗಿದೆ.