ನವದೆಹಲಿ:ಸರ್ಕಾರಿ ಮತ್ತು ಖಾಸಗಿ ನೌಕರರು ಕಡ್ಡಾಯವಾಗಿ ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಬಳಸಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ.
ಕಂಟೇನ್ಮೆಂಟ್ ಝೋನ್ನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರ ಮೊಬೈಲ್ನಲ್ಲಿ ಅರೋಗ್ಯ ಸೇತು ಆ್ಯಪ್ ಕಡ್ಡಾಯವಾಗಿ ಬಳಕೆಯಾಗಬೇಕೆಂದು ಸೂಚನೆ ನೀಡಲಾಗಿದೆ.

"ಆರೋಗ್ಯ ಸೇತು ಅಪ್ಲಿಕೇಶನ್ನ ಬಳಕೆಯನ್ನು ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಕಡ್ಡಾಯಗೊಳಿಸಲಾಗಿದೆ. ನೌಕರರು ಈ ಅಪ್ಲಿಕೇಶನ್ ಬಳಸುವಂತೆ ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿಯಾಗಿದೆ" ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್-19 ಸೋಂಕಿನ ಅಪಾಯವಿದೆಯೇ ಎಂದು ಗುರುತಿಸಲು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಬಳಕೆದಾರರಿಗೆ ಸಹಾಯ ಮಾಡುತ್ತದೆ. ಜೊತೆಗೆ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟುವ ವಿಧಾನಗಳು ಮತ್ತು ಅದರ ರೋಗಲಕ್ಷಣಗಳ ಕುರಿತು ಜನರಿಗೆ ಮಾಹಿತಿಯನ್ನು ಒದಗಿಸುತ್ತದೆ.