ನೋಯ್ಡಾ(ಉತ್ತರ ಪ್ರದೇಶ): ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಪೊಲೀಸರು ನೋಯ್ಡಾದಲ್ಲಿ ಮಂಗಳವಾರ ಬಂಧಿಸಿದ್ದು, ಕಾರ್ಯಾಚರಣೆ ವೇಳೆ ಪೊಲೀಸರು ಆರೋಪಿ ಕಾಳಿಗೆ ಗುಂಡು ಹೊಡೆದಿದ್ದಾರೆ.
ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮತ್ತು ಪೊಲೀಸರ ನಡುವೆ ಪರಸ್ಪರ ಲಘು ಗುಂಡಿನ ದಾಳಿ ನಡೆದಿದೆ. ಎನ್ಕೌಂಟರ್ ಸಮಯದಲ್ಲಿ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಲು ಪ್ರಯತ್ನಿಸಿದಾಗ ಆರೋಪಿಗಳು ಪೊಲೀಸರಿಗೆ ಗುಂಡು ಹಾರಿಸಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ಆರೋಪಿ ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದಾನೆ. ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.