ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಯುರೋಪಿಯನ್ ಒಕ್ಕೂಟದ ಸಂಸದರು, ಕಾಶ್ಮೀರಕ್ಕೆ ನೀಡಿದ್ದ ಆರ್ಟಿಕಲ್ 370 ಸ್ಥಾನಮಾನವನ್ನು ಹಿಂದಕ್ಕೆ ಪಡೆದಿದ್ದು ಭಾರತದ ಆಂತರಿಕ ವಿಷಯ ಎಂದು ಕೇಂದ್ರದ ನಡೆ ಸಮರ್ಥಿಸಿದರು. ಜೊತೆಗೆ ಜಾಗತಿಕ ಭಯೋತ್ಪಾದನೆ ವಿರುದ್ಧ ಹೋರಾಟ ಅಗತ್ಯ ಎಂದು ಪ್ರತಿಪಾದಿಸಿದರು.
ಕಣಿವೆ ರಾಜ್ಯಕ್ಕೆ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡ 23 ಯುರೋಪಿಯನ್ ಸಂಸದರು, ಪಶ್ಚಿಮ ಬಂಗಾಳದ ಐವರು ಕಾರ್ಮಿಕರನ್ನು ಹತ್ಯೆ ಮಾಡಿದ ಉಗ್ರರ ನಡೆಯನ್ನು ಖಂಡಿಸಿದರು. ಈ ನಿಯೋಗವು ಸೈನ್ಯ ಮತ್ತು ಪೊಲೀಸರು ಹಾಗೂ ಯುವ ಕಾರ್ಯಕರ್ತರಿಂದ ಮಾಹಿತಿ ಪಡೆದುಕೊಂಡು ಶಾಂತಿಯ ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ.