ನವದೆಹಲಿ:ಕೇಂದ್ರದ ಮಾಜಿ ವಿತ್ತ ಸಚಿವ, ಬಿಜೆಪಿಯ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಿಗಮ್ ಬೋಧ್ ಘಾಟ್ನಲ್ಲಿ ನೆರವೇರಿತು.
ಪಂಚಭೂತಗಳಲ್ಲಿ ಲೀನರಾದ ಅರುಣ್ ಜೇಟ್ಲಿ - ಬಿಜೆಪಿ
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಇಲ್ಲಿಂದ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ನಿಗಮ್ ಬೋಧ್ ಘಾಟ್ಗೆ ತಂದು, ಮಧ್ಯಾಹ್ನ 3.20ರ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆ

ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಕಳೆದ ಎರಡು ವಾರದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 15 ದಿನಗಳ ಕಾಲ ವೆಂಟಿಲೇಟರ್, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಿದ್ದರೂ ಅದು ಫಲಕಾರಿಯಾಗದೆ ಆಗಸ್ಟ್ 24ರ (ಶನಿವಾರ) ಮಧ್ಯಾಹ್ನ ಕೊನೆ ಉಸಿರೆಳೆದರು.