ನವದೆಹಲಿ:ಶನಿವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 2.30ರ ವೇಳೆ ನೆರವೇರಲಿದೆ.
ಜೇಟ್ಲಿ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ಬಿಜೆಪಿ ಕೇಂದ್ರ ಕಚೇರಿಗೆ ರವಾನಿಸಲಾಗಿದೆ. ಬಿಜೆಪಿ ಕೇಂದ್ರ ಕಚೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಅರುಣ್ ಜೇಟ್ಲಿ ಅಂತಿಮ ಸಂಸ್ಕಾರ ನಿಗಮ್ಬೋಧ್ ಘಾಟ್ನಲ್ಲಿ ಮಧ್ಯಾಹ್ನ 2.30ಕ್ಕೆ ನೆರವೇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ.
ಸದ್ಯ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಆಪ್ತ ಜೇಟ್ಲಿ ಅಂತಿಮ ಸಂಸ್ಕಾರಕ್ಕೆ ಗೈರಾಗಲಿದ್ದಾರೆ. ಪ್ರಧಾನಿ ಮೋದಿ ಯುಎಇನಿಂದ ನೇರವಾಗಿ ಫ್ರಾನ್ಸ್ಗೆ ತೆರಳಿದ್ದಾರೆ. ಫ್ರಾನ್ಸ್ನಲ್ಲಿ ನಡೆಯುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಟ್ರಂಪ್ ಜೊತೆಗೆ ಕಾಶ್ಮೀರ ಸಮಸ್ಯೆಯ ಕುರಿತಂತೆ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ ಎನ್ನಲಾಗ್ತಿದೆ.