ಭೋಪಾಲ್: ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆಯ ನಂತರ ಮಧ್ಯಪ್ರದೇಶದಲ್ಲಿ ಹೊಸ ಸರ್ಕಾರ ರಚಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂದು ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಮಧ್ಯಪ್ರದೇಶ ಸಿಎಂ ಆಗಿ ಶಿವರಾಜ್ ಸಿಂಗ್ ಚೌಹಾಣ್ ಇಂದು ಪ್ರಮಾಣವಚನ ಸಾಧ್ಯತೆ - ಮಧ್ಯಪ್ರದೇಶ ಸಿಎಂ ಆಗಿ ಶಿವರಾಜ್ ಸಿಂಗ್ ಚೌಹಾಣ್
ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಇಂದು ಮಧ್ಯಪ್ರದೇಶ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಶಿವರಾಜ್ ಸಿಂಗ್ ಚೌಹಾಣ್
ವಿಶ್ವಾಸ ಮತಯಾಚನೆಗೂ ಮುನ್ನವೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಹೊರಬಂದು ಬಂಡಾಯವೆದ್ದಿದ್ದ 22 ಶಾಸಕರು ಈಗಾಗಲೇ ಬಿಜೆಪಿ ಸೇರಿದ್ದಾರೆ. ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.