ನವದೆಹಲಿ:ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ಹಾಗೂ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರೊಂದಿಗೆ ಚಿಕ್ಕ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ.
ಇವತ್ತು ಬೆಳಗ್ಗೆ 11 ಗಂಟೆಗೆ ದೇಶದ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಿದ್ದರು. ಈ ವೇಳೆ ಕೊರೊನಾ ವೈರಸ್ ಹತ್ತಿಕ್ಕಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.