ಕರ್ನಾಟಕ

karnataka

ETV Bharat / bharat

ಬೈಕ್​ ಮೇಲೆ ಬಂದು ಬಾಂಬ್​ ಸ್ಫೋಟ... ಮಗು ಸೇರಿ 10 ಮಂದಿ ದುರ್ಮರಣ! - ಅಫ್ಘಾನಿಸ್ತಾನ

ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್​ ಸ್ಫೋಟಗೊಂಡ ಪರಿಣಾಮ 10 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿಲ್ಲ.

ಪ್ರಬಲ ಬಾಂಬ್​ ಸ್ಫೋಟ

By

Published : Oct 7, 2019, 7:51 PM IST

ಕಾಬೂಲ್​:ಮೋಟರ್ ​ಸೈಕಲ್​ ಮೇಲೆ ಬಂದ ವ್ಯಕ್ತಿಯೊಬ್ಬ ಬಾಂಬ್​ ಬ್ಲಾಸ್ಟ್​ ಮಾಡಿರುವ ಕಾರಣ, ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದರಲ್ಲಿ ಒಬ್ಬ ಮಗು ಸೇರಿದೆ. ಉಳಿದಂತೆ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಫ್ಘಾನಿಸ್ತಾನದ ಪೂರ್ವ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಭರದ ಕಾರ್ಯಾಚರಣೆ ನಡೆಸಿ, ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ. ಘಟನೆ ನಡೆದ ಕೆಲ ದೂರದಲ್ಲಿ ಅಫ್ಘಾನ್​ ಆರ್ಮಿ ಬಸ್​​ವೊಂದು ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಘಟನೆ ಹಿಂದೆ ಉಗ್ರರ ಕೈವಾಡವಿರುವುದು ಮೆಲ್ನೋಟಕ್ಕೆ ಸಾಬೀತುಗೊಂಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಉಗ್ರ ಸಂಘಟನೆ ಇದರ ಹೊಣೆ ಹೊತ್ತುಕೊಂಡಿಲ್ಲ. ಘಟನೆಗೆ ಅಲ್ಲಿನ ಗವರ್ನರ್​ ತೀವ್ರ ಸಂತಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details