ಕರ್ನಾಟಕ

karnataka

ETV Bharat / bharat

ರಾಜಸ್ಥಾನದಲ್ಲಿ ಕಾರು-ಬಸ್​ ನಡುವೆ ಡಿಕ್ಕಿ, ಆರು ಮಂದಿ ಸಾವು,ಅನೇಕರ ಸ್ಥಿತಿ ಗಂಭೀರ! - ಭೀಕರ ರಸ್ತೆ ಅಪಘಾತ

ಭೀಕರ ರಸ್ತೆ ಅಪಘಾತವೊಂದರಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ಅಪಘಾತ

By

Published : Sep 11, 2019, 7:09 PM IST

ಜೈಸಲ್ಮೇರ್​(ರಾಜಸ್ಥಾನ): ಕಾರು-ಬಸ್​ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್​​ನ ರಾಮದೇವರ್​ ರೈಲ್ವೇ ಕ್ರಾಸಿಂಗ್​​​ ಬಳಿ ನಡೆದಿದೆ.

ಭೀಕರ ರಸ್ತೆ ಅಪಘಾತ

ಲಭ್ಯವಾಗಿರುವ ಮಾಹಿತಿ ಪ್ರಕಾರ ಸರ್ಕಾರಿ ಬಸ್​ವೊಂದು ಪೋಕ್ರಾನ್​​ನಿಂದ ಫಲೋಧಿ ತೆರಳುತ್ತಿತ್ತು. ಇದೇ ವೇಳೆ ಫಲೋಧಿಯಿಂದ ಬಾಬಾ ರಾಮದೇವ್​ ದರ್ಶನಕ್ಕಾಗಿ ತೆರಳುತ್ತಿದ್ದ ವಾಹನವೊಂದು ರಭಸವಾಗಿ ಬಂದು ಬಸ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ಉಳಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಉಳಿದಂತೆ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ABOUT THE AUTHOR

...view details