ಅಯೋಧ್ಯೆ:ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸುತ್ತಿದ್ದ ಉತ್ತರ ಪ್ರದೇಶದ ಮೊಹಮ್ಮದ್ ಶರೀಫ್ ಅವರಿಗೆ ಭಾರತ ಸರ್ಕಾರ, ದೇಶದ ನಾಲ್ಕನೇ ಅತಿದೊಡ್ಡ ನಾಗರಿಕ ಪ್ರಶಸ್ತಿ 'ಪದ್ಮಶ್ರೀ' ನೀಡಿ ಗೌರವಿಸಿದೆ.
ಭಾರತ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನ ಗಣರಾಜ್ಯೋತ್ಸವ ಮುನ್ನಾ ದಿನ ನಿನ್ನೆ ಘೋಷಣೆ ಮಾಡಿತ್ತು. ಸಮಾಜ ಸೇವೆ ಹಿನ್ನೆಲೆಯಲ್ಲಿ ಮೊಹಮ್ಮದ್ ಶರೀಫ್ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಲಾಗಿದೆ.