ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಕಾಲ ಶಾಲಾ,ಕಾಲೇಜುಗಳು ಬಂದ್

ಅಯೋಧ್ಯೆ ತೀರ್ಪು ನಾಳೆ ಪ್ರಕಟಗೊಳ್ಳಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ ಮೂರು ದಿನಗಳ ಕಾಲ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜು​ಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಐತಿಹಾಸಿಕ ಅಯೋಧ್ಯೆ ತೀರ್ಪು

By

Published : Nov 8, 2019, 11:43 PM IST

ಲಕ್ನೋ: ರಾಮಜನ್ಮಭೂಮಿ ಪ್ರಕರಣದ ತೀರ್ಪು ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಸಕಲ ರೀತಿಯ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದ್ದು ರಾಜ್ಯದೆಲ್ಲಡೆ ಪೊಲೀಸ್​​​ ಸರ್ಪಗಾವಲು ಹಾಕಲಾಗಿದೆ.

ಇದರ ಬೆನ್ನಲ್ಲೇ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಅಂದರೆ ನವೆಂಬರ್​ 9ರಿಂದ 11ರವರೆಗೆ ಎಲ್ಲ ಶಾಲಾ-ಕಾಲೇಜುಗಳು​ ಹಾಗೂ ಶಿಕ್ಷಣ ತರಬೇತಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ತುರ್ತು ಸಭೆ ಕರೆದಿದ್ದಾರೆ.

ಈ ಮಧ್ಯೆ ಮಧ್ಯ ಪ್ರದೇಶ ರಾಜಧಾನಿ ಭೋಪಾಲ್​​ನಲ್ಲೂ ಸೆಕ್ಷನ್​ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗಿದ್ದು ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಸುಪ್ರೀಂಕೋರ್ಟ್​​​

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್​ ಅಧಿಕಾರಿ ಅರೀಶ್​ ತಿವಾರಿ, ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾವಹಿಸಲಾಗಿದ್ದು, ವಾಟ್ಸ್​​ಆಪ್​​, ಫೇಸ್​ಬುಕ್​ ಸೇರಿದಂತೆ ಪ್ರಮುಖ ಜಾಲತಾಣಗಳ ಮೇಲೆ ನಿಗಾ ಇರಿಸಲಾಗಿದ್ದು, ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶಕ್ಕೆ ಆಸ್ಪದ ನೀಡಲ್ಲ ಎಂದಿದ್ದಾರೆ.

ABOUT THE AUTHOR

...view details