ನವದೆಹಲಿ: ದಕ್ಷಿಣ ದೆಹಲಿಯ ಮಾಲ್ವಿಯಾ ನಗರದ ಜನಪ್ರಿಯ ಉಪಹಾರ ಗೃಹ ಬಾಬಾ ಕಾ ಢಾಬಾ ಮಾಲೀಕ ಕಾಂತಾ ಪ್ರಸಾದ್ ಅವರು ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹರಿಬಿಟ್ಟಿದ್ದ ಗೌರವ್ ವಾಸನ್ ವಿರುದ್ಧ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಪೊಲೀಸರಿಗೆ ನೀಡಿದ ದೂರಿನಲ್ಲಿ, ಪ್ರಸಾದ್ ಅವರು ವಾಸನ್ ತಮ್ಮ ವಿಡಿಯೋ ಚಿತ್ರೀಕರಿಸಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ಉಪಹಾರ ಗೃಹ ಮಾಲೀಕರಿಗೆ ಹಣವನ್ನು ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ ವಾಸನ್ ತನ್ನ ಮತ್ತು ಅವನ ಕುಟುಂಬ/ಸ್ನೇಹಿತರ ಬ್ಯಾಂಕ್ ವಿವರಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಮಾತ್ರ ದಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನನಗೆ ಯಾವುದೇ ಮಾಹಿತಿ ನೀಡದೇ ಅಪಾರ ಪ್ರಮಾಣದ ದೇಣಿಗೆ ಸಂಗ್ರಹಿಸಿದ್ದಾರೆ. ಮತ್ತು ಇ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.