ಲಖನೌ (ಉತ್ತರ ಪ್ರದೇಶ) :ಬಾಬ್ರಿ ಮಸೀದಿ ದ್ವಂಸ ಪ್ರಕರಣ ಸಂಬಂಧ ಇನ್ನುಳಿದ ಆರೋಪಿಗಳ ಹೇಳಿಕೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದಾಖಲಿಸಬಹುದು ಎಂದು ವಿಶೇಷ ನ್ಯಾಯಾಲಯ ಸೂಚಿಸಿದೆ.
ಕೋರ್ಟ್ ಸಿಆರ್ಪಿಸಿ ಸೆಕ್ಷನ್ 313 ರ ಅಡಿ 32 ಆರೋಪಿಗಳ ಹೇಳಿಕೆಗಳನ್ನು ದಾಖಲಿಸುತ್ತಿದೆ. ಇದು ವಿಚಾರಣೆಯ ಒಂದು ಹಂತವಾಗಿದ್ದು, ಈ ಮೂಲಕ ಸಾಕ್ಷಿಗಳನ್ನು ಪರೀಕ್ಷಿಸಲಾಗುತ್ತಿದೆ. ಅಲ್ಲದೇ ಇನ್ನುಳಿದ ಆರೋಪಿಗಳಲ್ಲಿ ಕೆಲವರು ಈಗಾಗಲೇ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದಾರೆ. ಆದರೆ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಇತರರ ಹೇಳಿಕೆಗಳನ್ನು ಇನ್ನೂ ಪಡೆದಿಲ್ಲ.