ಬರಮುಲ್ಲಾ(ಜಮ್ಮು ಮತ್ತು ಕಾಶ್ಮೀರ): ಉತ್ತರ ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಮನೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿ ನಡೆದ ದಾಳಿಯಲ್ಲಿ ಎರಡೂವರೆ ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.
ದಾಳಿಯಲ್ಲಿ ಗಾಯಗೊಂಡಿರುವ ಬಾಲಕಿಯನ್ನ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆತರುವಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನ ರದ್ದುಗೊಳಿಸಿದ ನಂತರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭದ್ರತಾ ದೃಷ್ಟಿಯಿಂದ ಹಲವು ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿತ್ತು. ಸದ್ಯ ಜಮ್ಮು ಮತ್ತು ಕಾಶ್ಮೀರದ 92.5ರಷ್ಟು ಪ್ರದೇಶ ನಿರ್ಬಂಧದಿಂದ ಮುಕ್ತವಾಗಿದ್ದು, ಯಥಾಸ್ಥಿತಿಗೆ ಮರಳಿದೆ ಎಂದು ಅಜಿತ್ ದೋವಲ್ ಮಾಹಿತಿ ನೀಡಿದ್ದಾರೆ.